ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಜನ ಆರೋಪಿಗಳು ವಶಕ್ಕೆ.
Friday, May 2, 2025

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದ. 2022ರ ಜುಲೈ 26ರಂದು ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿತ್ತೆಂದು ಹೇಳಲಾಗಿತ್ತು. ಪ್ರವೀಣ್ ನೆಟ್ಟಾರು ಹತ್ಯೆಯ ಸೇಡಿಗಾಗಿಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಈಗ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.