ಬೆಂಗಳೂರು:ಸ್ಯಾಂಡಲ್ ವುಡ್ ನಟ ಶಿವಣ್ಣನ ಮನೆಯಲ್ಲಿ ಮಹತ್ವದ ಸಭೆ; ಹಲವು ನಟರು ಭಾಗಿ.!!!
Saturday, May 17, 2025

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ನ ವಿವಿಧ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಚರ್ಚಿಸಿ ಪರಿಹರಿಸುವ ನಿಟ್ಟಿನಲ್ಲಿ ಇಂದು ನಟ ಶಿವರಾಜ್ ಕುಮಾರ್ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸದಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಕನ್ನಡ ನಟರಾದ ದುನಿಯಾ ವಿಜಯ್, ಗಣೇಶ್, ದ್ರುವ ಸರ್ಜಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಕನ್ನಡ ಸಿನಿಮಾಗಳು, ಟಿಕೆಟ್ ದರ ವಿಚಾರ, ಚಿತ್ರಮಂದಿರದಲ್ಲಿ ಪ್ರೇಕ್ಷಕರ ಸಂಖ್ಯೆ ಕುಸಿತ, ಚಿತ್ರಮಂದಿಗಳು ಬಂದ್, ಕನ್ನಡ ಸಿನಿಮಾಗಳ ಸವಾಲುಗಳು ಸೇರಿ ಹಲವು ಸಮಸ್ಯೆಗಳಿಗೆ ಪರಿಹರಿಸಲು ಹಾಗೂ ಕನ್ನಡ ಚಿತ್ರರಂಗ ಉಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಶೀಘ್ರದಲ್ಲಿಯೇ ನಟ ಶಿವರಾಜ್ ಕುಮರ್ ನೇತೃತ್ವದಲ್ಲಿ ಚಿತ್ರರಂಗದ ಹಿರಿಯರ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದೆ ಎಂದು ತಿಳಿದುಬಂದಿದೆ.