ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಳ; ನಾಳೆಯಿಂದ ಕೋವಿಡ್ ಟೆಸ್ಟ್ ಆರಂಭ.
Saturday, May 24, 2025

ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆಯಿಂದ(ಮೇ 25) ಕೋವಿಡ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ 35 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಅರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮೆಡಿಕಲ್ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ಕೊರೋನಾ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಕೋವಿಡ್ ಟೆಸ್ಟ್ ಲ್ಯಾಬ್ ತೆರೆಯಲು ಆರೋಗ್ಯ ಇಲಾಖೆ ಮುಂದಾಗಿದೆ.