ಬೆಂಗಳೂರು :ಹೆಚ್ಚಾಗುತ್ತಿದೆ ರಾಜ್ಯದಲ್ಲಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕುತ್ತಿರುವ ಪ್ರಕರಣ..!! ನಿಮ್ಮ  ಖಾಸಗಿ ವಿಡಿಯೋ ನನ್ನ ಬಳಿ ಇದೆ… ಆನಂದ್ ಗುರೂಜಿಗೆ ದಿವ್ಯಾ ವಸಂತ್ ಬ್ಲ್ಯಾಕ್‌ಮೇಲ್, ಕೇಸ್ ದಾಖಲು..

ಬೆಂಗಳೂರು :ಹೆಚ್ಚಾಗುತ್ತಿದೆ ರಾಜ್ಯದಲ್ಲಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕುತ್ತಿರುವ ಪ್ರಕರಣ..!! ನಿಮ್ಮ ಖಾಸಗಿ ವಿಡಿಯೋ ನನ್ನ ಬಳಿ ಇದೆ… ಆನಂದ್ ಗುರೂಜಿಗೆ ದಿವ್ಯಾ ವಸಂತ್ ಬ್ಲ್ಯಾಕ್‌ಮೇಲ್, ಕೇಸ್ ದಾಖಲು..

ಬೆಂಗಳೂರು: ರಾಜ್ಯದಲ್ಲಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಇದೀಗ ಪ್ರಖ್ಯಾತ ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಆನಂದ ಗುರೂಜಿ ದೂರು ದಾಖಲಿಸಿದ್ದಾರೆ.

ಈ ದೂರಿನ ಸಂಬಂಧ ಪೊಲೀಸರು ಕೃಷ್ಣಮೂರ್ತಿ(A1) ಹಾಗೂ ದಿವ್ಯಾ ವಸಂತ (A2) ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೋರ್ಟ್ನಿಂದ ತಡೆಯಾಜ್ಞೆ ತಂದರೂ ನಿಮ್ಮ ಸೆ… ವಿಡಿಯೋ ಇದೆ ಎಂದು ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ.

ಇಷ್ಟಕ್ಕೇ ಸುಮ್ಮನಾಗದ ದುಷ್ಕರ್ಮಿಗಳು ತಮ್ಮ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿ ದಿವ್ಯಾ ವಸಂತ ಬಂಧನವಾಗಿದ್ದಳು. ಇಂದಿರಾ ನಗರದ ಬ್ಯೂಟಿ ಪಾರ್ಲರ್ ನಲ್ಲಿ ಸ್ಟಿಂಗ್ ಆಪರೇಷನ್ ನಡೆಸಿ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಳು. ಈ ಸಂಬಂಧ ಪಾರ್ಲರ್ ಮಾಲೀಕರು ನೀಡಿದ್ದ ಹನಿಟ್ರ್ಯಾಪ್ ದೂರಿನ ಮೇರೆಗೆ ದಿವ್ಯಾ ವಸಂತಳನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದರು.

Ads on article

Advertise in articles 1

advertising articles 2

Advertise under the article