ಮಂಗಳೂರು:ಬಜ್ಪೆ ದುಷ್ಕರ್ಮಿಗಳಿಂದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹ*ತ್ಯೆ.

ಮಂಗಳೂರು:ಬಜ್ಪೆ ದುಷ್ಕರ್ಮಿಗಳಿಂದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಬರ್ಬರ ಹ*ತ್ಯೆ.

ಮಂಗಳೂರು ಮೇ 01: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ

ಕೊಲೆಯಾದ ವ್ಯಕ್ತಿಯನ್ನು ಸುಹಾಶ್ ಶೆಟ್ಟಿ ಎಂದು ಗುರುತಿಸಲಾಗಿದೆ.  ಸುಹಾಸ್ ರೌಡಿಶೀಟರ್ ಆಗಿದ್ದು, ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ, 2022ರ ಜುಲೈ 28ರಂದು  ಸುರತ್ಕಲ್ ನಲ್ಲಿ ಪಾಜೀಲ್ ನ್ನು ಕೊಲೆ ಮಾಡಲಾಗಿತ್ತು. ಫಾಜಿಲ್ ಹತ್ಯೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಪೊಲೀಸರು ಅರೆಸ್ಟ್ ಮಾಡಿದ್ದರು.  ಇದೀಗ ತಂಡವೊಂದು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸಿ ಸುಹಾಶ್ ಶೆಟ್ಟಿಯನ್ನು ಕೊಲೆ ಮಾಡಿದೆ. ತಲ್ವಾರ್ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದಲ್ಲಿದ್ದು ಗೋರಕ್ಷಣೆ ವಿಷಯದಲ್ಲಿ ಸಕ್ರಿಯನಾಗಿದ್ದ. ಕೊಲೆ, ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಇಂದು ರಾತ್ರಿ 8.30ರ ಸುಮಾರಿಗೆ ಆತನ ಮೇಲೆ ತಲವಾರು ದಾಳಿ ಮಾಡಿ ಬರ್ಬರವಾಗಿ ಕೊಂದು ಹಾಕಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
ಕಿನ್ನಿಪದವು ಪೇಟೆಯಲ್ಲಿ ಮೀನಿನ ಪಿಕ್ ಅಪ್ ಮತ್ತುಸುಹಾಸ್ ಶೆಟ್ಟಿ ಸಂಚರಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪಕ್ಕದಲ್ಲಿದ್ದ ಅಂಗಡಿಗೆ ನುಗ್ಗಿತ್ತು. ಆ ಬಳಿಕ ಮಾತಿನ ಚಕಮಕಿ ನಡೆದು ಹೊಡೆದಾಟ ಆರಂಭಗೊಂಡಿದ್ದು, ಆರೋಪಿಗಳು ಮಾರಕಾಸ್ತ್ರದಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದು, ಕೃತ್ಯ ನಡೆದಿರುವ ಸ್ಥಳವನ್ನು ಬಂದ್ ಮಾಡಿದ್ದಾರೆ.

ಸುಹಾಶ್ ಶೆಟ್ಟಿ ದಾಖಲಿಸಲಾಗಿದ್ದ ಆಸ್ಪತ್ರೆಗೆ ಬಿಜೆಪಿ ನಾಯಕರು ಆಗಮಿಸಿದ್ದಾರೆ. ಅಲ್ಲದೆ ಆಸ್ಪತ್ರೆಯ ಸುತ್ತ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Ads on article

Advertise in articles 1

advertising articles 2

Advertise under the article