ಬೆಂಗಳೂರು: ಕೋವಿಡ್‌ನಿಂದ ವ್ಯಕ್ತಿ ಸಾವು;ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ.
Sunday, May 25, 2025

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ . ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ.
ಇಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೊರೋನಾ ಬುಲೆಟಿನ್‌ನಲ್ಲಿ ಬೆಂಗಳೂರಿನಲ್ಲಿ ಕೋವಿಡ್-19ಗೆ ಒಬ್ಬ ಬಲಿಯಾಗಿದ್ದು, ರಾಜ್ಯದಲ್ಲಿ ಇಂದು 5 ಹೊಸ ಕೇಸ್‌ಗಳು ದಾಖಲಾಗಿವೆ. ಇದರ ಬೆನ್ನಲ್ಲೆ ಸರ್ಕಾರ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಜನರಿಗೆ ಒತ್ತಾಯಿಸುತ್ತಿದೆ.
ಹೌದು, ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನ 5 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಹಾಗೂ ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38 ಸಕ್ರೀಯ ಪ್ರಕರಣಳಿದ್ದು, ಇದರಲ್ಲಿ ಬೆಂಗಳೂರಿನಲ್ಲೇ ಬರೋಬ್ಬರಿ 32 ಕೇಸ್‌ಗಳು ದಾಖಲಾಗಿವೆ.