ಬಂಟ್ವಾಳ:ಹಾಡಹಗಲೇ ಪಿಕಪ್ ಚಾಲಕನ ಬರ್ಬರ ಹತ್ಯೆ, ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳ ಕೃತ್ಯ..!
Tuesday, May 27, 2025
ಬಂಟ್ವಾಳ: ಪಿಕಪ್ ಚಾಲಕನಾಗಿದ್ದ ಯುವಕನನ್ನು ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ನಡೆದಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಂ ಕೊಲೆಯಾದ ಯುವಕ ಎನ್ನುವ ಪ್ರಾಥಮಿಕ ಮಾಹಿತಿ ಲಭಿಸಿದೆ. ಇರಾಕೋಡಿ ಎಂಬಲ್ಲಿ ಮನೆಯೊಂದರ ಮುಂದೆ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.
ರಹೀಂ ಜೊತೆಗಿದ್ದ ಹನೀಫ್ ಎಂಬಾತನಿಗೂ ತಲವಾರು ದಾಳಿಯಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿದ್ದಾರೆ.