ಜಮ್ಮು :ಪಾಕ್ ಶೆಲ್ ದಾಳಿಯಲ್ಲಿ BSF ಯೋಧ ಹುತಾತ್ಮ, ಏಳು ಮಂದಿಗೆ ಗಾಯ.
Saturday, May 10, 2025

ಜಮ್ಮು: ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಶನಿವಾರ ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಬಿಎಸ್‌ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ ಎಸ್ ಪುರ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಸಬ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತೇಯಾಜ್ ಅವರು ಹುತಾತ್ಮರಾಗಿರುವುದಾಗಿ ಹಿರಿಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನವು ಆರಂಭಿಸಿದ ಗಡಿಯಾಚೆಗಿನ ಗುಂಡಿನ ದಾಳಿಯಲ್ಲಿ ಇಮ್ತೇಯಾಜ್ ಗಾಯಗೊಂಡು ಹುತಾತ್ಮರಾದರೆ, ಇತರ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.