ಆಂಧ್ರಪ್ರದೇಶ: ಅನ್ನಮಯ್ಯ ಪ್ರದೇಶ ಕುರುಪ್ಪಳ್ಳಿ ಗ್ರಾಮದಲ್ಲಿ ಬಾವಿಗೆ ಬಿದ್ದ ಕಾರು; ಕರ್ನಾಟಕದ ಮೂವರ ಸಾವು, ಇಬ್ಬರು ಪಾರು.
Sunday, May 18, 2025

ಆಂಧ್ರಪ್ರದೇಶ: ಕಾರು ಬಾವಿಗೆ ಉರುಳಿದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ.
ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಭಾನುವಾರ ಈ ಘಟನೆ ನಡೆದಿದೆ.
ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಮೃತಪಟ್ಟವರು. ಇಬ್ಬರು ಪ್ರಾಣಾಪಾದಿಂದ ಪಾರಾಗಿದ್ದಾರೆ.
ಅಡುಗೆ ಕೆಲಸಕ್ಕೆಂದು ಕಾರಿನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಿಲೇರು ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದರು. ಹಗ್ಗಗಳನ್ನು ಹಾಕಿ ಕಾರನ್ನು ಮೇಲೆತ್ತಲು ಪ್ರಯತ್ನಿಸಿದರು. ಪ್ರಯೋಜನವಾಗದ್ದರಿಂದ ಬಳಿಕ ಕ್ರೇನ್ ಮೂಲಕ ಕಾರನ್ನು ಹೊರತೆಗೆಲಾಯಿತು