ಕುಂದಾಪುರ:ಚೈತ್ರ ನನ್ನನ್ನು ಮದುವೆಗೆ ಕರೆದಿಲ್ಲ; ಚೈತ್ರ ಕುಂದಾಪುರ ತಂದೆಯಿಂದ ಸ್ಪೋಟಕ ಹೇಳಿಕೆ..!!

ಕುಂದಾಪುರ:ಚೈತ್ರ ನನ್ನನ್ನು ಮದುವೆಗೆ ಕರೆದಿಲ್ಲ; ಚೈತ್ರ ಕುಂದಾಪುರ ತಂದೆಯಿಂದ ಸ್ಪೋಟಕ ಹೇಳಿಕೆ..!!

ಉಡುಪಿ: ಕನ್ನಡ ಬಿಗ್ ಬಾಸ್ ಸೀಸನ್ 11ರ ಫೈರ್‌ಬ್ರ್ಯಾಂಡ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಚೈತ್ರಾ ಕುಂದಾಪುರ, ಶ್ರೀಕಾಂತ್ ಕಶ್ಯಪ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆದ್ರೆ ಚೈತ್ರಾ ಕುಂದಾಪುರ ಅವರ ಮದುವೆಗೆ ತಂದೆ ಬಂದಿರಲಿಲ್ಲ. ಆದರೀಗ ದಿಢೀರ್ ಅಂತ ಮಾಧ್ಯಮಗಳ ಮುಂದೆ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಮಾಧ್ಯಮದ ಮುಂದೆ ಚೈತ್ರಾ ಕುಂದಾಪುರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ತಮ್ಮ ಮಗಳಾದ ಚೈತ್ರಾ ಕುಂದಾಪುರ ತನ್ನ ಮದುವೆಗೆ ತನ್ನನ್ನು ಆಹ್ವಾನಿಸಲಿಲ್ಲ ಎಂದು ಆರೋಪಿಸಿರುವ ತಂದೆ ಬಾಲಕೃಷ್ಣ ನಾಯ್ಕ್. ಚೈತ್ರಾ ನನ್ನನ್ನು ಕರೆದಿಲ್ಲ, ನಾನೂ ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ’ ಎಂದಿದ್ದಾರೆ. ಇದಲ್ಲದೆ ಚೈತ್ರಾ ಮತ್ತು ಆಕೆಯ ಪತಿ ಶ್ರೀಕಾಂತ್ ಕಶ್ಯಪ್ ಇಬ್ಬರನ್ನೂ ‘ಕಳ್ಳರು’ ಎಂದು ಕರೆದು, ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.

ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್ಬಾಸ್ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ ಎಂದು ಹೇಳಿದ್ದಾರೆ.


Ads on article

Advertise in articles 1

advertising articles 2

Advertise under the article