ಹಾಸನ: ಭಾರೀ ಮಳೆಯಿಂದ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಯುವಕರು ಸಾವು.
Monday, May 26, 2025
ಹಾಸನ: ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮದಬಳಿ ಭಾರೀ ಮಳೆಯಿಂದ ರಸ್ತೆ ಕಾಣದೆ ಕಾರೊಂದು ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ಅಭಿಷೇಕ್ (27), ಶರತ್ (28) ಮೃತ ಯುವಕರು. ಗಾಯಾಳು ಧನಂಜಯ, ಸಂದೀಪ್‌ಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
KA-03-AK-5325 ನಂಬರ್‌ನ ಎರಿಟಿಗಾ ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ನಾಲ್ವರು ಯುವಕರು, ಮಳೆಯಿಂದ ರಸ್ತೆ ಕಾಣದೆ ಬಾಗೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.