ಬೆಂಗಳೂರು: ಭಾರಿ ಮಳೆಯೊಂದಿಗೆ ಆಟೋದ ಮೇಲೆ ಉರುಳಿ ಬಿದ್ದ ಮರ; ಆಟೋ ಚಾಲಕ ಸ್ಥಳದಲ್ಲೇ ಸಾವು.
Thursday, May 1, 2025

ಬೆಂಗಳೂರು: ಭಾರೀ ಮಳೆಯೊಂದಿಗೆ ಮರವೊಂದು ಆಟೋ ಮೇಲೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆಯ ಎಂ.ಎಂ ಬಾರ್ ಬಳಿಯಲ್ಲಿ ನಡೆದಿದೆ.
ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ಕೆ ಆರ್ ಮಾರ್ಕೆಟ್, ಕತ್ರಿಗುಪ್ಪೆ, ಜಯನಗರ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡ ಪರಿಣಾಮ ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರಿನ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.