ಮಂಗಳೂರು :ಜೈಲಿನಲ್ಲಿ ಮತ್ತೆ ಮಾರಾಮಾರಿ : ಕೈದಿಗಳ ಮಧ್ಯೆ ಹೊಡೆದಾಟ..
Tuesday, May 20, 2025

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮಂಗಳವಾರ ಮಧ್ಯಾಹ್ನ ಕೈದಿಗಳ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.
ಅಡುಗೆ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್ ಹೊಡೆದಿದ್ದಾನೆ. ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು.
ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ತೆರಳಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ