ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಯುವಕನೊಬ್ಬನ ಮೇಲೆ ಚಾಕು ಇರಿದ ದುಷ್ಕರ್ಮಿಗಳು; ಕೈಗೆ ಗಂಭೀರ ಗಾಯ ; ಮಂಗಳೂರಿನ ಆಸ್ಪತ್ರೆಗೆ ದಾಖಲು.
Friday, May 16, 2025

ಮಂಗಳೂರು : ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು ಕೈಗೆ ಗಂಭೀರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬವರು ಗಾಯಗೊಂಡವರು. ಹಳೆ ಸೇತುವೆ ಬಳಿಯ ಬಸ್ ನಿಲ್ದಾಣ ಬಳಿ ನಿಂತುಕೊಂಡಿದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ತಲವಾರು ಬೀಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಹಮೀದ್ ಕೈಗೆ ತಲವಾರು ಏಟು ಬಿದ್ದಿದ್ದು ಆಗಂತುಕರು ಅಲ್ಲಿಂದ ಪರಾರಿಯಾಗಿದ್ದಾರೆ.
ಬೈಕ್ ನಲ್ಲಿ ಬಂದಿದ್ದವರು ಹೆಲ್ಮೆಟ್ ಹಾಕಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಯಾರು ಕೃತ್ಯ ಎಸಗಿದ್ದಾರೆಂದು ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆ ನಡೆದ ಜಾಗ ಮುಸ್ಲಿಂ ಬಾಹುಳ್ಯ ಪ್ರದೇಶವಾಗಿದ್ದು ಯಾರು ಕೃತ್ಯ ಎಸಗಿದ್ದಾರೆಂದು ಪೊಲೀಸರು ನಿಗಾ ವಹಿಸಿದ್ದಾರೆ.