ಮಂಡ್ಯ: ಮಾಜಿ ಪಾಕ್ ಪ್ರಧಾನಿಗೆ ಮೋದಿ ಶೂ ಧರಿಸುವಂತೆ ಫೋಟೋ ಎಡಿಟ್ ; ಮಂಡ್ಯ ಪೊಲೀಸರಿಂದ ಬಿತ್ತು ಬೂಟಿನ ಏಟು.

ಮಂಡ್ಯ: ಮಾಜಿ ಪಾಕ್ ಪ್ರಧಾನಿಗೆ ಮೋದಿ ಶೂ ಧರಿಸುವಂತೆ ಫೋಟೋ ಎಡಿಟ್ ; ಮಂಡ್ಯ ಪೊಲೀಸರಿಂದ ಬಿತ್ತು ಬೂಟಿನ ಏಟು.


ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಯುವಕನ್ನು ತಾಲ್ಲೂಕಿನ ಕಿರುಗಾವಲು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಿರುಗಾವಲು ಗ್ರಾಮದ ಜಾವೀದ್ ಪಾಷ (33) ಬಂಧಿತ ಆರೋಪಿ

ಆರೋಪಿಯು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ. ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಮಾತನಾಡಿ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. 

ಮೇ 8ರಂದು ಎಐ ತಂತ್ರಜ್ಞಾನ ಬಳಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿ ಬಿಜೆಪಿ ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸರ ಗಮನಕ್ಕೆ ತಂದಿದ್ದರು.

ಪ್ರಧಾನಿ ನರೇಂದ್ರಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಹಂಚಿಕೊಂಡಿರುವ ಜಾವೀದ್ ಪಾಷ ವಿರುದ್ಧ ದೇಶದ್ರೋಹದಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದುತ್ವ ಪರ ಕಾರ್ಯಕರ್ತರು ಕಿರುಗಾವಲು ಪೊಲೀಸ್ ಠಾಣೆ ಮುಂದೆ ನೂರಾರು ಮಂದಿ ಜಮಾಯಿಸಿ ಆರೋಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಮಂಡ್ಯ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಮೋಹನ್ ಮಾತನಾಡಿ, ‘ಕಾಶ್ಮೀರದಲ್ಲಿ 26 ಮಂದಿ ಬಲಿ ಪಡೆದ ಪಾಕಿಸ್ತಾನ ಉಗ್ರರ ವಿರುದ್ಧ ಸಮರ ಸಾರಿರುವ ಸಂದರ್ಭದಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿರುವ ಇಂಥ ವ್ಯಕ್ತಿಯ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು

Ads on article

Advertise in articles 1

advertising articles 2

Advertise under the article