ನವದೆಹಲಿ :ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ.
Tuesday, May 27, 2025

ನವದೆಹಲಿ: ಕನ್ನಡದ ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿತ್ತು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಅನಂತ್ ನಾಗ್ ಅವರು 1948ರ ಸೆ.4ರಂದು ಉತ್ತರ ಕನ್ನಡದ ಶಿರಳ್ಳಿ ಗ್ರಾಮದಲ್ಲಿ ಜನಿಸಿದರು. 1973ರ ಸಂಕಲ್ಪ ಸಿನಿಮಾದಿಂದ ಸ್ಯಾಂಡಲ್ವುಡ್ನ ಬೆಳ್ಳಿ ತೆರೆಗೆ ಎಂಟ್ರಿಕೊಟ್ಟರು. ಕನ್ನಡದ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ನಾ ನಿನ್ನ ಬಿಡಲಾರೆ, ಬಯಲುದಾರಿ, ಅಂಕುರ್ ಮೂವಿ ಸೇರಿದಂತೆ ಹಲವು ಮೂವಿಗಳಲ್ಲಿ ಅನಂತ್ ನಾಗ್ ಅವರು ಅಭಿನಯ ಮಾಡಿ ಯಶಸ್ಸು ಕಂಡುಕೊಂಡರು.
ನವದೆಹಲಿಯಲ್ಲಿ ಪಾಂಡಿ ರಾಮ್ ಮಾಂಡವಿ ಅವರು ಕಲೆ-ಮರ ಕರಕುಶಲ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.