ಬೆಂಗಳೂರು :ಕನ್ನಡ ಮಾತನಾಡಲ್ಲ ಅಂತ ಧಿಮಾಕು ತೋರಿದ್ದ SBI ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ.

ಬೆಂಗಳೂರು: ಕನ್ನಡ ಮಾತನಾಡೋದಿಲ್ಲ. ಇದು ಇಂಡಿಯಾ ಇಲ್ಲಿ ಹಿಂದಿ ಮಾತನಾಡುತ್ತೇನೆ ಎಂದು ಉದ್ಧಟತನ ತೋರಿದ್ದ ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ ಮಾಡಲಾಗಿದೆ.
ಚಂದಾಪುರದ ಎಸ್ಬಿಐ ಬ್ಯಾಂಕ್ಗೆ ಕೆಲಸ ನಿಮಿತ್ತ ಗ್ರಾಹಕರೊಬ್ಬರು ಹೋಗಿದ್ದರು. ಬ್ಯಾಂಕ್ ಮ್ಯಾನೇಜರ್ ಪ್ರಿಯಾಂಕಾ, ಗ್ರಾಹಕರ ಜೊತೆ ಹಿಂದಿಯಲ್ಲಿ ಮಾತನಾಡಿದ್ದಾರೆ. ಇದಕ್ಕೆ, ಗ್ರಾಹಕ ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಆಗ, ಬ್ಯಾಂಕ್ ಮ್ಯಾನೇಜರ್ ಪ್ರಿಯಾಂಕಾ ಗಾಹಕರಿಗೆ ಹಿಂದಿಯಲ್ಲಿ ಮಾತನಾಡುವಂತೆ ಹೇಳಿದ್ದು, ಇದು ಭಾರತ ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸುವಂತ ಹೇಳಿಕೆ ನೀಡಿದ್ದಾರೆ.
ಇನ್ನು, ಬ್ಯಾಂಕ್ ಮ್ಯಾನೇಜರ್ ದರ್ಪ ತೋರಿರುವ ದೃಶ್ಯವನ್ನು ಗ್ರಾಹಕ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬ್ಯಾಂಕ್ ಮ್ಯಾನೇಜರ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ
ಕನ್ನಡಿಗರ ಹೋರಾಟಕ್ಕೆ ಹೆದರಿ ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸಿ ನಿನ್ನೆ ರಾತ್ರಿಯೇ ಆದೇಶ ಹೊರಡಿಸಿದೆ.