ಮಂಗಳೂರು :ಸುಹಾಸ್ ಶೆಟ್ಟಿ ಕೊಲೆಗೆ ಸಂಚು ; ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮತ್ತೆ ಮೂವರು ಆರೋಪಿಗಳ ಸೆರೆ, ಸಿಸಿಬಿ ಪೊಲೀಸರ ಕಾರ್ಯಾಚರಣೆ.

ಮಂಗಳೂರು :ಸುಹಾಸ್ ಶೆಟ್ಟಿ ಕೊಲೆಗೆ ಸಂಚು ; ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮತ್ತೆ ಮೂವರು ಆರೋಪಿಗಳ ಸೆರೆ, ಸಿಸಿಬಿ ಪೊಲೀಸರ ಕಾರ್ಯಾಚರಣೆ.

ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಮೇ 1ರಂದು ಬಜ್ಪೆ ಬಳಿಯ ಕಿನ್ನಿಪದವು ಎಂಬಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿ ಆನಂತರ ತಲೆಮರೆಸಿಕೊಂಡಿದ್ದ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸುರತ್ಕಲ್ ಕಳವಾರು ನಿವಾಸಿ ಅಜರುದ್ದೀನ್ @ ಅಜರ್ @ ಅಜ್ಜು(29), ಕಾಪು ಬಳಿಯ ಬೆಳಪು ನಿವಾಸಿ ಅಬ್ದುಲ್ ಖಾದರ್ @ ನೌಫಲ್(24), ಫರಂಗಿಪೇಟೆ ಬಳಿಯ ಕುಂಪನಮಜಲು ನಿವಾಸಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್(39) ಬಂಧಿತರು. 

ಆರೋಪಿಗಳ ಪೈಕಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿರುತ್ತದೆ. ಈತನೇ ಪ್ರಮುಖ ಆರೋಪಿಗಳಿಗೆ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಬ್ದುಲ್ ಖಾದರ್ ಆರೋಪಿಗಳು ಕೊಲೆ ಕೃತ್ಯದ ಬಳಿಕ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. 

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಜರುದ್ದೀನ್ ಜೈಲು ಸೇರಿದ್ದಾನೆ. ಅಬ್ದುಲ್ ಖಾದರ್ ಮತ್ತು ನೌಷದ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಎರಡೇ ದಿನದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಘಟನೆ ಸಂಬಂಧಿಸಿ ಇತರ ಆರೋಪಿಗಳನ್ನು ಬಂಧಿಸಲು ಎನ್ಐಎ ತನಿಖೆ ಮಾಡಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು.

Ads on article

Advertise in articles 1

advertising articles 2

Advertise under the article