ವಿಶಾಖಾಪಟ್ಟಣಂ: ಸಮುದ್ರ ತೀರದಲ್ಲಿ 5 ಲಕ್ಷ ಜನರೊಂದಿಗೆ ಯೋಗಾಸನ ; ವಿಶ್ವ ದಾಖಲೆ ಸೃಷ್ಟಿಸಿದ ಪ್ರಧಾನಿ ಮೋದಿ.!!
Saturday, June 21, 2025

ವಿಶಾಖಪಟ್ಟಣಂ: ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಇತ್ತ ವಿಶಾಖಪಟ್ಟಣಂನಲ್ಲಿ ಅದ್ಧೂರಿಯಾಗಿ ಯೋಗ ದಿನಾಚರಣೆಗೆ ವೇದಿಕೆ ಸಜ್ಜು ಮಾಡಲಾಗಿತ್ತು. ಬೆಳಗ್ಗೆ 6.30ಕ್ಕೆ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರೊಂದಿಗೆ ಯೋಗ ಮಾಡಿದ್ದಾರೆ.
ವಿಶಾಖಪಟ್ಟಣಂನ ಆರ್.ಕೆ.ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಯೋಗ ಕೇವಲ ವ್ಯಾಯಾಮವಲ್ಲ, ಅದು ಒಂದು ಜೀವನದ ಭಾಗ. ಪ್ರತಿಯೊಬ್ಬರು ಯೋಗ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.
ಯೋಗ ಎಂದರೆ ಎಲ್ಲರೂ ಒಂದಾಗುವುದು. ಇಡೀ ವಿಶ್ವವೇ ಯೋಗ ದಿನ ಆಚರಿಸುತ್ತಿರುವುದು ಸಾಧಾರಣ ವಿಷಯವಲ್ಲ. ಯೋಗ ಇಂದು ವಿಶ್ವವನ್ನೇ ಒಂದು ಮಾಡಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.