ದಾವಣಗೆರೆ :ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿಯನ್ನ ಪುಸಲಾಯಿಸಿ ಅತ್ಯಾಚಾರ ; ಇಬ್ಬರು ಅಪ್ರಾಪ್ತ ಬಾಲಕರ ಬಂಧನ, ನೆರೆಮನೆ ಮಕ್ಕಳಿಂದಲೇ ಕೃತ್ಯ !
ದಾವಣಗೆರೆ, ಜೂ 23 : ಮನೆಯ ಮುಂದೆ ಆಟವಾಡುತ್ತಿದ್ದ 7 ವರ್ಷದ ಬಾಲಕಿಯನ್ನ ಪುಸಲಾಯಿಸಿ, ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಇದೀಗ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮನೆಯ ಅಕ್ಕಪಕ್ಕದ ಮನೆಯ 15 ಹಾಗೂ 17 ವರ್ಷದ ಬಾಲಕರು ಈ ಹಿಂದೆ ಬಾಲಕಿಯೊಂದಿಗೆ ಪರಿಚಯ ಮಾಡಿಕೊಂಡಿದ್ದರು. ಬಾಲಕಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಬಾಲಕಿಯ ಪರಿಚಯ ಮಾಡಿಕೊಂಡ ಇಬ್ಬರು ಬಾಲಕರು ಆಕೆಯೊಂದಿಗೆ ಮಾತನಾಡುತ್ತಾ ಸ್ನೇಹ ಬೆಳೆಸಿಕೊಂಡಿದ್ದಾರೆ.
ಈ ವೇಳೆ ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಆಕೆಯನ್ನು ಪುಸಲಾಯಿಸಿ ಅಲ್ಲಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಬಳಿಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ತಮಗೆ ಏನು ಗೊತ್ತೇ ಇಲ್ಲದಂತೆ ಎಸ್ಕೇಪ್ ಆಗಿದ್ದಾರೆ.
ಇತ್ತ ಆಟವಾಡುತ್ತಿದ್ದ ಮಗಳು ಎಲ್ಲೂ ಕಾಣಿಸದ ಹಿನ್ನಲೆ ಆಕೆಯನ್ನು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ನೆರೆಯ ಮನೆಗೆ ಹೋದಾಗ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಗೊತ್ತಾಗುತ್ತದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಇಬ್ಬರು ಅಪ್ರಾಪ್ತ ಬಾಲಕರನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಬಾಲಕರಿಗೆ ವೈದ್ಯಕೀಯ ತಪಾಸಣೆ ಮಾಡಿಸಿ, ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.