ಅಹಮದಾಬಾದ್‌ :ಏರ್ ಇಂಡಿಯಾ ವಿಮಾನ ದುರಂತದಲ್ಲಿ ಎಲ್ಲ ಪ್ರಯಾಣಿಕರು ಸಾವು..

ಅಹಮದಾಬಾದ್‌ :ಏರ್ ಇಂಡಿಯಾ ವಿಮಾನ ದುರಂತದಲ್ಲಿ ಎಲ್ಲ ಪ್ರಯಾಣಿಕರು ಸಾವು..

ಗುಜರಾತ್‌: ಅಹಮದಾಬಾದ್‌ನಲ್ಲಿ ಇಂದು  ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್‌ಲೈನರ್ (AI171) ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮೇಘನಿನಗರದ ಜೆಬಿ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ.

 

ಈ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಹಮದಾಬಾದ್‌ನಿಂದ ಇಂದು ಮಧ್ಯಾಹ್ನ 3.38ಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು.

 

Ads on article

Advertise in articles 1

advertising articles 2

Advertise under the article