ಹಾಸನ: ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ; ಮೇಲೇಳುತ್ತಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಸಾವು..
Sunday, June 22, 2025

ಹಾಸನ: ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು.
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ