ಶಿವಮೊಗ್ಗ :ಕಾಂತಾರ ಶೂಟಿಂಗ್ ವೇಳೆ ಶಿಪ್ ಪಲ್ಟಿ; ಹೊಂಬಾಳೆ ಫಿಲ್ಮ್ಸ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸ್ಪಷ್ಟನೆ.
ಶಿವಮೊಗ್ಗ: ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ʼಕಾಂತಾರ-1ʼ ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ಶಿಪ್ ಮಗುಚಿದ ಘಟನೆ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್ ಸ್ಪಷ್ಟನೆ ನೀಡಿದ್ದಾರೆ.
"ಮಾಣಿ ಹಿನ್ನೀರಿನಲ್ಲಿʼಕಾಂತಾರ ಚಾಪ್ಟರ್ 1ʼ ಚಿತ್ರೀಕರಣ ನಡೆಯುತ್ತಿದೆ. ಬ್ಯಾಕ್ ಡ್ರಾಪ್ಗೋಸ್ಕರ ಶಿಪ್ ಸೆಟ್‌ನ್ನು ಹಾಕಲಾಗಿತ್ತು. ಜೋರಾದ ಗಾಳಿ – ಮಳೆಯಿಂದ ಶಿಪ್ ಪಲ್ಟಿಯಾಗಿದೆ. ನಮ್ಮ ತಂಡದವರು ಯಾರೂ ಕೂಡ ಅದರ ಸುತ್ತಮುತ್ತ ಇರಲಿಲ್ಲ. ನಮ್ಮ ಶೂಟಿಂಗ್ ದೂರದಲ್ಲಿ ನಡೆಯುತ್ತಿತ್ತು. ಚಿತ್ರೀಕರಣ ಸಂದರ್ಭದಲ್ಲಿ ಯಾರಿಗೂ ಯಾವುದೇ ಅವಘಡ ಸಂಭವಿಸಿಲ್ಲ. ಈಗ ಶೂಟಿಂಗ್ ಮುಂದುವರೆಸಿದ್ದೇವೆ" ಎಂದರು
ಚಿತ್ರೀಕರಣಕ್ಕೆ ಬೇಕಾದ ಅನುಮತಿಯನ್ನು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕೆಪಿಸಿ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯಿಂದಲೂ ಸಹ ಪಡೆಯಲಾಗಿದೆ. ನಾವು ನೀರಿನ ಭಾಗದಲ್ಲಿ ಯಾವುದೇ ರೀತಿಯ ಚಿತ್ರೀಕರಣವನ್ನು ಮಾಡುತ್ತಿಲ್ಲ. ಆದ್ರೂ ಸುರಕ್ಷತೆ ದೃಷ್ಟಿಯಿಂದ ಸ್ಪೀಡ್ ಬೋಟ್ ಇಟ್ಟುಕೊಂಡು ಶೂಟಿಂಗ್ ಮಾಡುತ್ತಿದ್ದೇವೆ. ಕ್ಯಾಮರಾ ನೀರಿಗೆ ಬಿದ್ದಿದ್ದರೆ ಇಂದು ನಾವು ಚಿತ್ರೀಕರಣ ಮಾಡಲು ಆಗುತ್ತಿರಲಿಲ್ಲ. ಇಂದು ಬೆಳಗ್ಗೆ ರಿಷಬ್ ಶೆಟ್ಟಿ ಅವರು ಸ್ಥಳಕ್ಕೆ ಬಂದು ಪರಿಶೀಲಿಸಿ ಹೋಗಿದ್ದಾರೆ" ಎಂದು ಹೇಳಿದರು