ಬಂಟ್ವಾಳ: ಪತಿ, ಗರ್ಭಿಣಿ ಪತ್ನಿಯ ಮೃತದೇಹಗಳು ಮನೆಯಲ್ಲಿ ಪತ್ತೆ.!!
Thursday, June 19, 2025

ಮಂಗಳೂರು: ಪತಿ ಮತ್ತು ಗರ್ಭಿಣಿ ಪತ್ನಿಯ ಮೃತದೇಹಗಳು ಅವರ ವಾಸವಿದ್ದ ಮನೆಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಗೆ ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿತ್ತು. ಆದರೆ ಈವರೆಗೆ ದಂಪತಿಗೆ ಮಕ್ಕಳು ಆಗಿರಲಿಲ್ಲ. ಪ್ರಸ್ತುತ ಪತ್ನಿ ಜಯಂತಿ ಗರ್ಭಿಣಿಯಾಗಿದ್ದರು. ಜುಲೈ 2ಕ್ಕೆ ಸೀಮಂತದ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದ ದಂಪತಿ ಕೊನೆಯುಸಿರೆಳೆದಿದ್ದಾರೆ.
ಆದರೆ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದಿಲ್ಲ. . ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.