ಹಾಸನ: ಜನವರಿಯೊಳಗೆ ಕರ್ನಾಟಕ ಸೇರಿ ದೇಶದಲ್ಲಿ ಭಾರೀ ವಿಪತ್ತು: ಕೋಡಿಶ್ರೀ ಭವಿಷ್ಯ..!!!
Saturday, June 21, 2025
ಹಾಸನ: ಮುಂದಿನ ಜನವರಿಯೊಳಗೆ ಕರ್ನಾಟಕ ಹಾಗೂ ಭಾರತಕ್ಕೆ ಭಾರೀ ದೊಡ್ಡ ಗಂಡಾಂತರ ಕಾದಿದೆ. ಯಾರೂ ಊಹಿಸಿರದ ದುಃಖ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುವ ಬಗ್ಗೆ ಮೊದಲೇ ಹೇಳಿದ್ದೆ. ವಿಮಾನ ಅಪಘಾತ ಸೇರಿದಂತೆ ಕೆಲವು ಆಪತ್ತುಗಳು ಸಂಭವಿಸಿವೆ. ಮುಂದೆ ಇನ್ನೊಂದು ದೊಡ್ಡ ಮೇಘಸ್ಫೋಟ ಸಂಭವಿಸಲಿದೆ. ನಿರೀಕ್ಷೆಗೂ ಮೀರಿದ ದುಃಖ ಬರಲಿದೆ ಎಂದು ಮುನ್ಸೂಚನೆ ನೀಡಿದರು.
ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಜನಜೀವನ ಅಸ್ಥಿರಗೊಳ್ಳಲಿದೆ ಎಂದು ಹೇಳಿದ್ದೆ. ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಈಗ ಕಂಡುಬರುತ್ತಿದೆ. ಈ ಅಸ್ಥಿರತೆ ಹೆಚ್ಚಾಗಲಿದೆ ಎಂದು ಸ್ವಾಮೀಜಿ ಹೇಳಿದರು.
‘ಸೂಳೆಯ ಮಗನುಟ್ಟಿ ಆಳುವನು ಮುನಿಪುರವ ಯುದ್ಧವಿಲ್ಲದ ಮಡಿಯೇ ಪುರವೆಲ್ಲ ಕೂಳಾದೀತು’ ಎಂದು ಮಾರ್ಮಿಕವಾಗಿ ನುಡಿದ ಸ್ವಾಮೀಜಿ, ಇದನ್ನು ಬರೆದಿಟ್ಟುಕೊಂಡಿರಿ. ಇದಕ್ಕೆ ಪರಿಹಾರ ಆಮೇಲೆ ಸೂಚಿಸುವೆ ಎಂದರು.