ಪುತ್ತೂರು :ಮದುವೆಯಾಗವುದಾಗಿ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮುಖಂಡನ ಪುತ್ರನ ವಿರುದ್ಧ ದೂರು ದಾಖಲು..!!
ಮಂಗಳೂರು: ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎನ್ನುವರ ಪುತ್ರ ಕೃಷ್ಣ ರಾವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಆರೋಪಿ ಕೃಷ್ಣ, ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ಇದೀಗ ಮದುವೆಯಾಗಲು ನಿರಾಕರಿಸಿದ್ದಾನೆ.
ಮಂಗಳೂರಿನ ಖಾಸಗಿ ಕಾಲೇಜಿನ Bsc ವ್ಯಾಸಂಗ ಮಾಡುತ್ತಿರುವ ಯುವತಿ ಹಾಗೂ ಆರೋಪಿ ಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ಓದುವಾಗ ಪರಸ್ಪರ ಲವ್ ಮಾಡುತ್ತಿದ್ದರು. ಬಳಿಕ ಮನೆಯಲ್ಲಿ ಯಾರೂ ಇಲ್ಲದ ವೇಳೆ 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮನೆಗೆ ಕರೆದು ಮದುವೆಯಾಗುತ್ತೇನೆ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಲ್ಲದೇ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾದ ವಿಚಾರ ತಿಳಿದು ಕೃಷ್ಣ ಮದುವೆಗೆ ನಿರಾಕರಣೆ ಮಾಡಿದ್ದಾನೆಂದು ಆರೋಪಿಸಲಾಗಿದೆ.
ಈ ಸಂಬಂಧ ಇದೀಗ ಯುವತಿ, ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡಿರುವ ಪೊಲೀಸರು ಶ್ರೀಕೃಷ್ಣನ ಪತ್ತೆಗೆ ಬಲೆ ಬೀಸಿದ್ದಾರೆ.