ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಕೇಸ್ ;ಆರೋಪಿಗಳು NIA ವಶಕ್ಕೆ..!!
Monday, June 23, 2025
ಬೆಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬಂಧ ಎನ್ಐಎ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿದೆ.
ಕಳೆದ ತಿಂಗಳು ಮೇ.01ರ ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಾಗಿತ್ತು. ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಎನ್ಐಎ ಕೂಡ ನಡೆಸುತ್ತಿದ್ದು, ಬಂಧಿತ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನಾಯ್ಯಾಲಯದ ಮುಂದೆ ಮನವಿ ಮಾಡಿದ್ದಾರೆ.
ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ ಜುಲೈ 1ರವರೆಗೆ ಆರೋಪಿಗಳನ್ನು ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.