ಬೆಂಗಳೂರು :ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ಜೀವ ಕಳೆದುಕೊಂಡ ವೃದ್ಧ ದಂಪತಿ.!
ಬೆಂಗಳೂರು: ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ನಡೆದಿದೆ.
ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ತಂದೆ, ತಾಯಿಯನ್ನು ಕಳೆದ 1 ತಿಂಗಳ ಹಿಂದೆಯಷ್ಟೇ ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದನು. ಮನೆಯಲ್ಲಿ ಸೊಸೆ ಮಾಡಿದ ಅಡುಗೆ ಚೆನ್ನಾಗಿರಲ್ಲ ಅನ್ನೊ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ, ತಾಯಿ ಇಬ್ಬರನ್ನು ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದನು.
ಮೊನ್ನೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋಗಿದ್ದ ವೃದ್ಧ ದಂಪತಿ ನೇಣಿಗೆ ಶರಣಾಗಿದ್ದಾರೆ. ಆದರೆ ನಿನ್ನೆ ಬೆಳಗಿನ ಜಾವ ಬಾಗಿಲು ತೆಗೆದಿರಲಿಲ್ಲ. ಇದರಿಂದ ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಈ ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನು ಸೇರಿಸಿದ್ದನು. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಮನೆಯಲ್ಲಿ ಹೊಂದಾಣಿಕೆ ಆಗಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು