
ಮಂಗಳೂರು :ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಅಬ್ದುಲ್ ರಜಾಕ್ ಆರೆಸ್ಟ್.!!!
Tuesday, June 3, 2025

ಮಂಗಳೂರು: ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಬಂಧಿತ ಆರೋಪಿ.
ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿರುವುದು ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್ ಜೊತೆ ಸೇರಿ ಸುಹಾಸ್ ಶೆಟ್ಟಿ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪಿವಿದೆ.
ಮೇ 1 ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.