ಚಾಮರಾಜನಗರ :ಐದು ಹುಲಿಗಳ ಸಾವು ಪ್ರಕರಣ -ಡಿಸಿಎಫ್ ಸೇರಿ ಮೂವರು ಅಧಿಕಾರಿಗಳ ಸಸ್ಪೆಂಡ್..!!

ಚಾಮರಾಜನಗರ :ಐದು ಹುಲಿಗಳ ಸಾವು ಪ್ರಕರಣ -ಡಿಸಿಎಫ್ ಸೇರಿ ಮೂವರು ಅಧಿಕಾರಿಗಳ ಸಸ್ಪೆಂಡ್..!!

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಫ್ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದೆ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳಿಗೆ ವಿಷಪ್ರಾಶನ ಮಾಡಿ ಕೊಂದಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಹುಲಿ ಹಸುವನ್ನು ಕೊಂದು ತಿಂದಿದ್ದಕ್ಕೆ ಹಸುವಿನ ಮಾಲೀಕ ಸೇರಿ ಮೂವರು ವಿಷಪ್ರಾಶನ ಮಾಡಿಸಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದರು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯಲೋಪವೇ ಘಟನೆಗೆ ಕಾರಣ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಡಿಸಿಎಫ್ ಚಕ್ರಪಾಣಿ ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article