ಮೈಸೂರು :ರೈತ ದಸರಾದಲ್ಲಿ ಕೃಷಿ ಪರಿಕರಗಳ ಪ್ರದರ್ಶನ, ರ‍್ಯಾಲಿ: ರೈತರೊಂದಿಗೆ ಒಗ್ಗಟ್ಟಾಗಿ ನಿಲ್ಲಲು ಕೃಷಿ ಸಚಿವರ ಕರೆ. ಮೈಸೂರು ದಸರಾ ಅಂಗವಾಗಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ  ಉದ್ಘಾಟಿಸಲಾದ ರೈತ ದಸರಾ ಮೆರವಣಿಗೆ...!!

ಮೈಸೂರು :ರೈತ ದಸರಾದಲ್ಲಿ ಕೃಷಿ ಪರಿಕರಗಳ ಪ್ರದರ್ಶನ, ರ‍್ಯಾಲಿ: ರೈತರೊಂದಿಗೆ ಒಗ್ಗಟ್ಟಾಗಿ ನಿಲ್ಲಲು ಕೃಷಿ ಸಚಿವರ ಕರೆ. ಮೈಸೂರು ದಸರಾ ಅಂಗವಾಗಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಉದ್ಘಾಟಿಸಲಾದ ರೈತ ದಸರಾ ಮೆರವಣಿಗೆ...!!

ಮೈಸೂರು ರೈತ ದಸರಾ  MINISTER N CHALUVARAYA SWAMY  MYSURU DASARA 2025  MYSURU

ಮೈಸೂರು: "ನಮ್ಮ ಪರಿಸವನವನ್ನು, ಸಂಸ್ಕಾರವನ್ನು, ಹಿಂದೆ ನಡೆದು ಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ ನಾಡಿನ ರೈತರು ಎಂದೆಂದಿಗೂ ಸಹ ಮುಂದು. ಈ ಬಾರಿ ರೈತ ದಸರಾದಲ್ಲಿ ರೈತರಿಗೆ ಹೆಚ್ಚು ಅವಕಾಶ ನೀಡಬೇಕು, ರೈತರೊಂದಿಗೆ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು" ಎಂದು ಹೇಳಿ ರೈತ ದಸರಾಗೆ ಕೃಷಿ ಸಚಿವ ಎನ್​. ಚೆಲುವರಾಯಸ್ವಾಮಿ ಅವರು ಚಾಲನೆ ನೀಡಿದರು.


ಶುಕ್ರವಾರ ಮೈಸೂರು ದಸರಾ ಅಂಗವಾಗಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ, ರೈತ ದಸರಾ ಮೆರವಣಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, "ಮೈಸೂರು ದಸರಾ ರಾಜ್ಯ ಮತ್ತು ರಾಷ್ಟ್ರಮಟ್ಟ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮ್ಮ ದೇಶದ ಹೆಮ್ಮೆಯ ವಿಷಯವಾಗಿದೆ. ಆಧುನಿಕ ಕೃಷಿ ಪದ್ಧತಿಯಲ್ಲಿ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಬಳಕೆಯಿಂದಾಗಿ ಕೂಲಿ ಕಾರ್ಮಿಕರ ಸಮಸ್ಯೆ ಬಗೆಹರಿಸಿಕೊಳ್ಳುವುದರೊಂದಿಗೆ ಉತ್ತಮವಾದ ಫಸಲು ಪಡೆದುಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದುವತ್ತ ನಮ್ಮ ರೈತರು ಮುಂದಾಗಬೇಕೆಂದು" ಎಂದು ಸಚಿವ ಚಲುವರಾಯಸ್ವಾಮಿ ಅವರು ರೈತರಿಗೆ ಕರೆ ನೀಡಿದರು.

"ಪ್ರಸ್ತುತ ರೈತರಿಗೆ ಅವಶ್ಯಕವಿರುವ ಸೌಲಭ್ಯ ಮತ್ತು ಮಾರ್ಗದರ್ಶನಗಳನ್ನು ಸರ್ಕಾರದಿಂದ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರೈತ ದಸರಾ ಎಂಬ ಹೆಸರಿನಲ್ಲಿ ಕೃಷಿಗೆ ಸಂಬಂಧಿಸಿದ ತೋಟಗಾರಿಕೆ, ಮೀನುಗಾರಿಕೆ, ಹೈನುಗಾರಿಕೆ, ರೇಷ್ಮೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಎಲ್ಲಾ ಇಲಾಖೆಗಳನ್ನು ಒಗ್ಗೂಡಿಸಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು" ತಿಳಿಸಿದರು.

ಬಳಿಕ ಪಶುಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ, "ರೈತ ದಸರಾದಲ್ಲಿ ಹೊಸ ಹೊಸ ತಂತ್ರಜ್ಞಾನದ ಪರಿಚಯ ಮಾಡುವುದು, ಅವುಗಳ ಉಪಯೋಗದ ಬಗ್ಗೆ ತಿಸುವಂತಹ ಕೆಲಸ ಮಾಡುತ್ತಿರುವುದು ಬಹಳ ಸಂತೋಷದ ವಿಷಯವಾಗಿದೆ. ಕೃಷಿಯು ದಿನ ಕಳೆದಂತೆ ದುಬಾರಿಯಾಗುತ್ತಿದ್ದು, ಈ ವ್ಯವಸಾಯದ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವುದರ ಮೂಲಕ ಉಪಯೋಗವನ್ನು ರೈತರು ಪಡೆದುಕೊಳ್ಳಬಹುದಾಗಿದೆ. ರೈತರಿಗೆ ಕೃಷಿಯಲ್ಲಿ ಆಧುನಿಕ ಬದ್ಧತೆಯ ಬಗ್ಗೆ ತಿಳುವಳಿಕೆ ಮೂಡಿಸುವುದು ಬಹಳ ಮುಖ್ಯ" ಎಂದರು.

ಅರಮನೆ ಕೋಟೆ ಆಂಜನೇಯ ಮೈದಾನದಿಂದ ದೇವರಾಜ ಅರಸು ರಸ್ತೆಯ ಮೂಲಕ ಜೆ.ಕೆ. ಗ್ರೌಂಡ್​ವರೆಗೂ ಸಾಗಿದ ರೈತ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದರು. ಈ ಬಾರಿ ವಿಶೇಷವಾಗಿ ನಂದಿ ಧ್ವಜ, ನಗಾರಿ ಹಾಗೂ ತಮಟೆ, ವೀರಗಾಸೆ, ವೀರಗಾಸೆ ವೀರಭದ್ರ ನೃತ್ಯ, ಖಡ್ಗ ಪ್ರದರ್ಶನ, ಕಂಸಾಳೆ ನೃತ್ಯ, ಚಿಲಿಪಿಲಿ ಗೊಂಬೆ, ನಾದಸ್ವರ ಪೂಜೆ ಕುಣಿತ ಜೊತೆಗೆ ವಿವಿಧ ತಳಿಯ ಎತ್ತುಗಳು, ಕರುಗಳು, ಆಂಧ್ರ ತಳಿಯಾದ ಪುಂಗನೂರು ಎತ್ತು, ಹೋರಿ, ಹಳ್ಳಿಕಾರ್​ ತಳಿ, ಬಂಡೂರು ಕುರಿಗಳು, ಎತ್ತಿನಗಾಡಿ ಎತ್ತುಗಳನ್ನು ಕರೆತರಲಾಗಿತ್ತು.

ಹೊಸ ಹೊಸ ಕೃಷಿ ತಂತ್ರಜ್ಞಾನಗಳಾದ ಬೆಳೆ ಸಿಂಪಡಿಸುವ ಡ್ರೋನ್​ ತಂತ್ರಜ್ಞಾನ ಯಂತ್ರ, ಭತ್ತ ನಾಟಿ ಯಂತ್ರ, ಇಫ್ಕೋ ನ್ಯಾನೋ ಯೂರಿಯಾ ಲಿಕ್ವಿಡ್​, ಸ್ವರಾಜ್​ ಯಂತ್ರ, ಕಿಸಾನ್​ ಬಂಡಿ, ಪವರ್​ ಇಂಟರ್​ ಕಲ್ಟಿವೇಟರ್​ ಯಂತ್ರ, ಕಳೆ ತೆಗೆಯುವ ಯಂತ್ರ, ಹೈಟೆಕ್ ಹಾರ್ವೆಸ್ಟರ್ ಹಬ್ ಬಹು ಬೆಳೆಯ ಒಕ್ಕಣೆ ಯಂತ್ರ, ಭತ್ತದ ಬೇಲರ್, ಕಬ್ಬು ನಾಟಿ ಯಂತ್ರ, ಕಬ್ಬು ಕಟಾವು ಯಂತ್ರ ತೋಟಗಾರಿಕೆ ಇಲಾಖೆಯ ಟ್ಯಾಬ್ಲೋಗಳಂತಹ ಹೊಸ ಹೊಸ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತು.

ಈ ಸಂಧರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್​ ಗೌಡ, ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿ ಸಿದ್ದೇಗೌಡ, ರೈತ ದಸರಾದ ಕಮಿಟಿಯ ಅಧ್ಯಕ್ಷ ಯೋಗೇಶ್ ಹಾಗೂ ರೈತ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article