
ವಿಜಯಪುರ :ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!
Tuesday, September 16, 2025

ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದರೋಡೆ ನಡೆದಿದೆ. ವಿಜಯಪುರ ಜಿಲ್ಲೆ ಚಡಚಣದಲ್ಲಿ ಎಸ್.ಬಿ.ಐ. ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ನಡೆಸಲಾಗಿದೆ.
ಮ್ಯಾನೇಜರ್, ಕ್ಯಾಷಿಯರ್ ಸೇರಿ ಬ್ಯಾಂಕ್ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.
ದರೋಡೆಕೋರರು ಅಪಾರ ನಗದು, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ.
ಪಿಸ್ತೂಲು, ಮಾರಕಾಸ್ತ್ರಗಳೊಂದಿಗೆ ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.