ಬೆಂಗಳೂರು:ಸಾಮೂಹಿಕ ಆತ್ಮಹತ್ಯೆಗೆ ಒಂದೇ ಕುಟುಂಬದ ನಾಲ್ವರ ಯತ್ನ: ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ!!
Friday, October 31, 2025

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಗ್ಗನಹಳ್ಳಿಯಲ್ಲಿ ನಡೆದಿದೆ.
ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ತಂದೆ ಹಾಗೂ ಹಿರಿಮಗ ಸಾವನ್ನಪ್ಪಿದ್ದರೆ, ತಾಯಿ ಹಾಗೂ ಕಿರಿ ಮಗನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.