ದೆಹಲಿ :ಸ್ಫೋಟ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಟ್ಟೆಚ್ಚರ -ನಗರದೆಲ್ಲೆಡೆ ತಪಾಸಣೆ,ಲಾಡ್ಜ್​, ಹೋಟೆಲ್​ಗಳ ಮೇಲೂ ನಿಗಾ...!!

ದೆಹಲಿ :ಸ್ಫೋಟ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಟ್ಟೆಚ್ಚರ -ನಗರದೆಲ್ಲೆಡೆ ತಪಾಸಣೆ,ಲಾಡ್ಜ್​, ಹೋಟೆಲ್​ಗಳ ಮೇಲೂ ನಿಗಾ...!!

ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಫೋಟದ  ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬಿಗ್ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಡೀ ಖಾಕಿ ಕಟ್ಟೆಚ್ಚರ ವಹಿಸಿದೆ.

ಬೆಂಗಳೂರಲ್ಲಿ ನಾಕಾಬಂದಿ ಹಾಕಿ ಪೊಲೀಸರು  ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿದ್ದು, ಅನುಮಾನಸ್ಪದ ವಾಹನಗಳ ಮಾಹಿತಿ ಸಂಗ್ರಹ ಮಾಡಿದ್ದಾರೆ. ಡಿಸಿಪಿಗಳೇ ಖುದ್ದು ಫೀಲ್ಡ್​ಗೆ ಇಳಿದು ಪರಿಶೀಲನೆ ನಡೆಸಿದ್ದಾರೆ.ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್​​, ಮಾಲ್​ಗಳು​​​​ ಸೇರಿದಂತೆ ನಗರದೆಲ್ಲೆಡೆ ತಪಾಸಣೆ ಹಾಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರತಿ ವಿಭಾಗದ ಮುಖ್ಯ ರಸ್ತೆಗಳಲ್ಲಿ ಪೊಲೀಸರಿಂದ ತಪಾಸಣೆ ನಡೆದಿದ್ದು, ಲಾಡ್ಜ್ ಹಾಗೂ ಹೊಟೇಲ್​​ಗಳ ಮೇಲೂ ನಿಗಾ ವಹಿಸಲಾಗಿದೆ.

Ads on article

Advertise in articles 1

advertising articles 2

Advertise under the article