ಬೆಳಗಾವಿ :ರಾಜ್ಯೋತ್ಸವ ವೇಳೆ ಐವರಿಗೆ ಚಾಕು ಇರಿತ, ಇಬ್ಬರ ಸ್ಥಿತಿ ಗಂಭೀರ..!!

ಬೆಳಗಾವಿ :ರಾಜ್ಯೋತ್ಸವ ವೇಳೆ ಐವರಿಗೆ ಚಾಕು ಇರಿತ, ಇಬ್ಬರ ಸ್ಥಿತಿ ಗಂಭೀರ..!!

ಬೆಳಗಾವಿ: 70ನೇ ರಾಜ್ಯೋತ್ಸವದ ಸಂಭ್ರಮದ ವೇಳೆಯೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೂಪಕಗಳ ಮೆರವಣಿಗೆ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಬೆಳಗಾವಿಯ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮೆರವಣಿಗೆ ವೇಳೆ ಜನರ ನಡುವೆಯೇ ನುಗ್ಗಿ ಬಂದ ದುಷ್ಕರ್ಮಿಗಳು ಐವರಿಗೆ ಮನಬಂದಂತೆ ಚಾಕು ಇರಿದಿದ್ದು, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಚಾಕು ಇರಿತದಿಂದ ಐವರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಗಾಯಾಳುಗಳನ್ನು ಗುರುನಾಥ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್, ವಿನಾಯಕ ಹಾಗೂ ನಜೀರ್ ಪಠಾಣ್ ಎಂದು ಗುರುತಿಸಲಾಗಿದೆ. ಚಾಕು ಇರಿತದಿಂದ ಗಾಯಗೊಂಡವರು ನೆಹರುನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

Ads on article

Advertise in articles 1

advertising articles 2

Advertise under the article