ಕುಂದಾಪುರ :ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ನಿಂದ ಭಕ್ತರಿಗೆ ವಂಚನೆ, ಪ್ರಕರಣ ದಾಖಲು...!!

ಕುಂದಾಪುರ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಗೆ ವಂಚನೆ ಮಾಡಲಾಗಿದೆ. ಅಧಿಕೃತ ವೆಬ್‌ಸೈಟ್‌ನಂತೆ ಕಾಣುವ ತಾಣದ ಮೂಲಕ ಹಣ ಪಡೆದು ನಕಲಿ ರಸೀದಿ ನೀಡಲಾಗಿದೆ. ಈ ಸಂಬಂಧ ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ನಡೆಯುತ್ತಿದೆ. ಆನ್‌ಲೈನ್ ವಂಚನೆಗಳ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
ದೇವಸ್ಥಾನದ ಅಧಿಕೃತ ವೆಬ್ ಸೈಟ್ http://karnatakatemplesaccommodation.com ಬದಲಿಗೆ karnatakatempleaccommodation ಎಂಬ ಹೆಸರಿನ ಅನಧಿಕೃತ ನಕಲಿ ವೆಬ್ಸೈಟ್ನ್ನು ರಚಿಸಿದ್ದು, ಈ ನಕಲಿ ವೆಬ್ಸೈಟ್ ಮೂಲಕ ಹಲವಾರು ಜನರಿಗೆ ವಂಚನೆ ಎಸಗಲಾಗಿದೆ.
ನಕಲಿ ವೆಬ್ಸೈಟ್ ಮೂಲಕ ಭಕ್ತರಿಗೆ ಲಲಿತಾಂಬಿಕಾ ಅತಿಥಿಗೃಹದ ಕೊಠಡಿಯನ್ನು ಕಾಯ್ದಿರಿಸಿ, ವಾಟ್ಸ್ಆ್ಯಪ್ ಮೂಲಕ ಪೋನ್ ಪೇ ಕ್ಯೂ ಆರ್ ಕೋಡ್ ಅನ್ನು ನೀಡಿ ಹಣ ಪಡೆದು, ನಕಲಿ ರಶೀದಿ ನೀಡಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.