ಪುತ್ತೂರು: ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟೋ ಚಾಲಕನ ಪುತ್ರಿ ಸಾವು, ಇಬ್ಬರು ಗಂಭೀರ...!!!

ಪುತ್ತೂರು: ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟೋ ಚಾಲಕನ ಪುತ್ರಿ ಸಾವು, ಇಬ್ಬರು ಗಂಭೀರ...!!!

ಪುತ್ತೂರು : ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನ್ನಪ್ಪಿದ ಘಟನೆ ಮಾಣಿ-  ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. 

ರಿಕ್ಷಾ ಚಾಲಕ ಹನೀಫ್ ಎಂಬವರ ಮಗಳು ಶಜ್ವಾ ಫಾತಿಮಾ(6) ಮೃತ ಬಾಲಕಿ ಎಂದು ತಿಳಿದುಬಂದಿದೆ. ಪುತ್ತೂರು ನಗರದಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಆಗಮಿಸುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. 

ಪುತ್ತೂರು ತಾಲೂಕಿನ ಬನ್ನೂರು ನಿವಾಸಿಯಾದ ಹನೀಫ್ ರಿಕ್ಷಾ ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಹನೀಫ್ ಅವರ ಆರು ವರ್ಷದ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ. ಇತರ ಐವರು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ

Ads on article

Advertise in articles 1

advertising articles 2

Advertise under the article