ಬೆಂಗಳೂರು :ಸ್ಕ್ಯಾನಿಂಗ್‌ ವೇಳೆ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ; ಕಾಮುಕ ವೈದ್ಯನ ವಿರುದ್ಧ ಪ್ರಕರಣ ದಾಖಲಾದರೂ ಪೊಲೀಸರು ಮೌನ, ಆನೇಕಲ್ ನಲ್ಲಿ ಕಚಡಾ ಡಾಕ್ಟರ್ !

ಬೆಂಗಳೂರು :ಸ್ಕ್ಯಾನಿಂಗ್‌ ವೇಳೆ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ; ಕಾಮುಕ ವೈದ್ಯನ ವಿರುದ್ಧ ಪ್ರಕರಣ ದಾಖಲಾದರೂ ಪೊಲೀಸರು ಮೌನ, ಆನೇಕಲ್ ನಲ್ಲಿ ಕಚಡಾ ಡಾಕ್ಟರ್ !

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೇಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ.

ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್‌ ಮಾಡುವಾಗ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಧಮ್ಕಿ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಆರೋಪಿ ಕಾಮುಕ ಜಯಕುಮಾರ್‌ನನ್ನು ಈವರೆಗೆ ಬಂಧಿಸಿಲ್ಲ. ಠಾಣೆಗೆ ಕರೆಸಿ, ಬಿಟ್ಟು ಕಳುಹಿಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article