ಕೇರಳ :ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀಕ ಸೇರಿ ಇಬ್ಬರ ಬಂಧನ, 400 ಗ್ರಾಮ್ ಚಿನ್ನವೂ ವಶಕ್ಕೆ..!!

ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನವನ್ನು ಖರೀದಿಸಿದ್ದ ಬಳ್ಳಾರಿ ಮೂಲದ ಜುವೆಲ್ಲರಿ ಮಾಲಕ ಸೇರಿ ಇಬ್ಬರನ್ನು ಕರ್ನಾಟಕದಲ್ಲಿ ಬಂಧಿಸಿದೆ.
ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ಬೆಂಗಳೂರಿನ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ. ಇವರನ್ನು ತಿರುವನಂತಪುರದ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದು ಖಚಿತ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2019ರಲ್ಲಿ ದೇವಸ್ಥಾನದ ಟ್ರಸ್ಟಿಯಾಗಿದ್ದ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಅಲಂಕಾರಕ್ಕಾಗಿ ಸ್ಮಾರ್ಟ್ ಕ್ರಿಯೇಷನ್‌ಗೆ ತೆಗೆದಕೊಂಡು ಹೋಗಿದ್ದರು. ಆ ವೇಳೆ ಅದರಲ್ಲಿದ್ದ 400 ಗ್ರಾಮ್ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್‌ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.
ಕಳವುಗೈದ ಚಿನ್ನವನ್ನು ಜುವೆಲ್ಲರಿ ಉದ್ಯಮಿ ಗೋವರ್ಧನ್ ಅವರಿಗೆ ಮಾರಾಟ ಮಾಡಲಾಗಿದೆ ಎಂದು ಉಣ್ಣಿಕೃಷ್ಣನ್ ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಇದರಂತೆ ಬೆಂಗಳೂರು, ಬಳ್ಳಾರಿಯಲ್ಲಿ ತನಿಖೆ ನಡೆಸಿದ ಪೊಲೀಸರು
ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಪಂಕಜ್ ಭಂಡಾರಿ ಹಾಗೂ ಗೋವರ್ಧನ್ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿದ ಬೆನ್ನಲ್ಲೇ ಇವರನ್ನು ಎಸ್‌ಐಟಿ ವಿಚಾರಣೆ ನಡೆಸಿತ್ತು. ಈಗಾಗಲೇ ಪೊಲೀಸರು ಗೋವರ್ಧನ್ ಅವರಿಗೆ ಸೇರಿದ ಚಿನ್ನದ ಜುವೆಲ್ಲರಿಯಿಂದ 400 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ.