ಮಂಗಳೂರು:ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸಿದರು!..ಕೇರಳ- ಕರ್ನಾಟಕದಲ್ಲಿ 42 ಕೇಸುಗಳ ಸರದಾರ ಕುಖ್ಯಾತ ದರೋಡೆಕೋರ ಫೈಸಲ್ ಸೇರಿ ಇಬ್ಬರ ಬಂಧನ..!!

ಮಂಗಳೂರು:ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸಿದರು!..ಕೇರಳ- ಕರ್ನಾಟಕದಲ್ಲಿ 42 ಕೇಸುಗಳ ಸರದಾರ ಕುಖ್ಯಾತ ದರೋಡೆಕೋರ ಫೈಸಲ್ ಸೇರಿ ಇಬ್ಬರ ಬಂಧನ..!!

ಮಂಗಳೂರು : ನಗರದ ಯೆಯ್ಯಾಡಿ ಬಳಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳವು ಪ್ರಕರಣದ ಬೆನ್ನತ್ತಿ ಇಬ್ಬರು ಕಳ್ಳರನ್ನು ವಶಕ್ಕೆ ಪಡೆದ ಕದ್ರಿ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಭಟ್ಕಳದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಪ್ರಕರಣ ಬೆಳಕಿಗೆ ಬಂದಿದೆ.‌

ಡಿ.12ರಂದು ಯೆಯ್ಯಾಡಿಯ ಶ್ರೀಹರಿ ಕಾಂಪ್ಲೆಕ್ಸ್ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಯಮಹಾ ಕಂಪನಿಯ ಮೋಟಾರ್ ಸೈಕಲನ್ನು ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಉಳ್ಳಾಲದ ಫೈಸಲ್ ಅಲಿಯಾಸ್ ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರ ನಿವಾಸಿ ನಿತೀನ್ ಕುಮಾರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಒಪ್ಪಿಕೊಂಡಿದ್ದರು. 

ಅಲ್ಲದೆ, ಆರೋಪಿಗಳು ಡಿ.13ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ನಿವಾಸಿ ವಯೋವೃದ್ದ ಮಹಿಳೆ ಶ್ರೀಮತಿ ಹೊನ್ನಮ್ಮ ಮಹಾದೇವ ನಾಯ್ಕ್ [ 70] ಎಂಬವರ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಬಾಯಿ ಬಿಟ್ಟಿದ್ದಾರೆ. ಆರೋಪಿಗಳಿಂದ ಚಿನ್ನದ ಸರ-1, ಇದರ ಅಂದಾಜು ಮೌಲ್ಯ ರೂ 1,20,000/- ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್-1 ಅಂದಾಜು ಮೌಲ್ಯ ರೂ  45,000/- ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಪೈಸಲ್ @ ತೋಟ ಪೈಸಲ್ ವಿರುದ್ದ ಕರ್ನಾಟಕದ ಉಡುಪಿ ಕಾರ್ಕಳ, ಮಣಿಪಾಲ, ಮಂಗಳೂರು, ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ, ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ ಹಾಗೂ ಕೇರಳ ರಾಜ್ಯಗಳಲ್ಲಿ ರಾಬರಿ, ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ ಸುಮಾರು 42 ಪ್ರಕರಣಗಳು ದಾಖಲಾಗಿರುತ್ತದೆ. ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆತಪ್ಪಿಸಿಕೊಂಡಿದ್ದ. 

ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್ಐ ಮನೋಹರ್ ಪ್ರಸಾದ್, ಎ.ಎಸ್.ಐ.ಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಹೆಚ್.ಸಿ.ಗಳಾದ ಲೋಕೇಶ್, ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ. ಮತ್ತು ಪಿ.ಸಿ.ಗಳಾದ ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

Ads on article

Advertise in articles 1

advertising articles 2

Advertise under the article