ಬೆಂಗಳೂರು: ಕೂಡ್ಲು ಗೇಟ್ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕ.

ಬೆಂಗಳೂರು: ಕೂಡ್ಲು ಗೇಟ್ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕ.

ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಂಗಳವಾರ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕ ಮೃತಪಟ್ಟಿದ್ದಾನೆ. 

ಯುವಕನನ್ನು ಬಂಟ್ವಾಳದ ಅಜಿಲಮೊಗರು ಸಮೀಪದ ಅಲ್ಲಿಪಾದೆ ನಿವಾಸಿ ಮುಹಮ್ಮದ್ ಹಾರಿಸ್ (34) ಎಂದು ಗುರುತಿಸಲಾಗಿದೆ.

ಮುಹಮ್ಮದ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ತನ್ನ ಸ್ನೇಹಿತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ಗಾಡಿ ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದ್ದು, ಹಾರಿಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹಾರಿಸ್ ಕಳೆದ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಬಂಟ್ವಾಳದಲ್ಲಿ ಪ್ರಸಿದ್ಧವಾಗಿರುವ ಅಜಿಲಮೊಗರು ದರ್ಗಾದ ಉರೂಸು ನಡೆಯುತ್ತಿರುವ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಮೂರು ದಿನಗಳ ಹಿಂದಷ್ಟೇ ಊರಿಗೆ ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಸಂಬಂಧ ಹೆಚ್‌ ಎಸ್‌ ಆರ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಯುವಕ ಹಾರಿಸ್ ಮೃತದೇಹವನ್ನ ಹುಟ್ಟೂರಿಗೆ ಕಳಿಸಿಕೊಟ್ಟಿದ್ದಾರೆ.

Ads on article

Advertise in articles 1

advertising articles 2

Advertise under the article