ಮಂಗಳೂರು :ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ ಸಿಲುಕಿದ ವಲಸೆ ಕಾರ್ಮಿಕ ಸಾವು, ಕಲ್ಲಾಪು ಬಳಿ ಘಟನೆ..!
Tuesday, December 16, 2025

ಉಳ್ಳಾಲ: ಮನೆಯ ಹಿಂದಿನ ಆವರಣ ಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ ವಲಸೆ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನ ಕೂಳೂರಿನಲ್ಲಿ ವಾಸವಾಗಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ (35) ಮೃತ ವ್ಯಕ್ತಿ. ಸೇವಂತಿಗುತ್ತುವಿನ ಗೌತಮ್ ರಾಜ್ ಎಂಬವರ ಮನೆಯ ಹಿಂಭಾಗದಲ್ಲಿ ಕಳೆದ ಮಳೆಗಾಲದಲ್ಲಿ ಎತ್ತರ ಪ್ರದೇಶದ ಗುಡ್ಡದ ಮಣ್ಣು ಕುಸಿತವಾಗಿತ್ತು. ಗೌತಮ್ ರಾಜ್ ಅವರು ಕೆಲ ದಿನಗಳ ಹಿಂದಷ್ಟೆ ಮನೆಯ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದರು.




