ಬೆಂಗಳೂರು :ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವರ ಕ್ಲಾಸ್ ; ನಿರ್ಲಕ್ಷ್ಯ ಮಾಡಿದ್ರೆ ಮುಲಾಜಿಲ್ಲದೆ ಕ್ರಮ, ಡ್ರಗ್ಸ್ ವಿರುದ್ಧ ದೇಶಾದ್ಯಂತ ಜಂಟಿ ಕಾರ್ಯಾಚರಣೆ, ಯಾರಿಗೂ ಕ್ರೆಡಿಟ್ ಹೋಗೋದಿಲ್ಲ..!

ಬೆಂಗಳೂರು :ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವರ ಕ್ಲಾಸ್ ; ನಿರ್ಲಕ್ಷ್ಯ ಮಾಡಿದ್ರೆ ಮುಲಾಜಿಲ್ಲದೆ ಕ್ರಮ, ಡ್ರಗ್ಸ್ ವಿರುದ್ಧ ದೇಶಾದ್ಯಂತ ಜಂಟಿ ಕಾರ್ಯಾಚರಣೆ, ಯಾರಿಗೂ ಕ್ರೆಡಿಟ್ ಹೋಗೋದಿಲ್ಲ..!

ಬೆಂಗಳೂರು: ಮುಂಬೈ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನ ಪೊಲೀಸ್ ಅಧಿಕಾರಿಗಳ ಜೊತೆಗೆ ಮೀಟಿಂಗ್ ನಡೆಸಿದ್ದು ಹಿರಿಯ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. 

ನಗರದಲ್ಲಿ ಪತ್ತೆಯಾಗಿರುವ ಡ್ರಗ್ಸ್ ಮೌಲ್ಯ 58 ಕೋಟಿ ಅಲ್ಲ. ಒಂದು ಕೆ.ಜಿ.ಗೆ 30 ಲಕ್ಷ ರೂ. ಬೆಲೆಯಂದ್ರೆ ಅಂದಾಜು 4 ಕೆ.ಜಿ.ಗೆ 1.20 ಕೋಟಿ ರೂ. ಆಗುತ್ತದೆ. ಡ್ರಗ್ಸ್ ದಂಧೆಯ ವಿರುದ್ದ ಅಕ್ಟೋಬರ್‌ನಿಂದ ಹೆಚ್ಚಿನ ರೀತಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಎರಡು ದಿನಗಳ ಹಿಂದಿನ ಘಟನೆ ಬಗ್ಗೆ ಸಮರ್ಥಿಸಿಕೊಳ್ಳಲು ಹೋಗುವುದಿಲ್ಲ. ಅನೇಕ ಸಂದರ್ಭಗಳಲ್ಲಿ ನಮ್ಮ ಪೊಲೀಸರು, ಇಲ್ಲಿ ಸಿಕ್ಕ ಆರೋಪಿಗಳು ನೀಡಿರುವ ಮಾಹಿತಿ ಆಧರಿಸಿ ಬೇರೆ ರಾಜ್ಯಗಳಲ್ಲಿ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

ಈಗಾಗಲೇ ಬೇರೆ ಬೇರೆ ಪ್ರಕರಣಗಳಲ್ಲಿ ನಾಲ್ಕು ಪೊಲೀಸರ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಆಗ ಅಲ್ಲಿನ ಪೊಲೀಸರ ವೈಫಲ್ಯ ಎಂದು ಹೇಳಲಾಗುತ್ತದೆಯೇ? ಮೂರು ಕಡೆಗಳಲ್ಲಿ ಫ್ಯಾಕ್ಟರಿ ಇತ್ತು ಎಂಬುದು ಸುಳ್ಳು. ಕಾರ್ಯಾಚರಣೆ ವೇಳೆ ನಮ್ಮ ಡಿಸಿಪಿಯವರು ಮುಂಬೈ ಪೊಲೀಸರೊಂದಿಗೆ ಇದ್ದರು. ಡ್ರಗ್ಸ್ ದಂಧೆಯ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತ ರೂಪದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಶನಿವಾರ ಮಹಾರಾಷ್ಟ್ರ ಪೊಲೀಸರು ಮುಂಬೈನಲ್ಲಿ ಸಿಕ್ಕ ಆರೋಪಿಯ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಆರೋಪಿಯೊಬ್ಬನನ್ನು ಹಿಡಿದಿದ್ದಾರೆ. ಮುಂಬೈ ಪೊಲೀಸರು ಮತ್ತು ಬೆಂಗಳೂರು ನಗರ ಪೊಲೀಸರು, ಎನ್‌ಸಿಬಿ, ಸೋಕೋ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಡ್ರಗ್ಸ್ ತಯಾರಿಸಲು ಬೇಕಾದ ಮೆಫೆಡ್ರಿನ್ ಎಂಬ ಕೆಮಿಕಲ್ ಸಂಗ್ರಹಿಸಿಟ್ಟುಕೊಂಡಿದ್ದ. ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸರು ಏನು ಕ್ರಮ ಕೈಗೊಂಡಿಲ್ಲ ಎಂಬ ಮಾತುಗಳು ಸರಿಯಲ್ಲ ಎಂದರು.

ಮುಜಾಜಿಲ್ಲದೇ ಕ್ರಮದ ಎಚ್ಚರಿಕೆ 

ನೂರಾರು ಕೋಟಿ ರೂ. ಮೌಲ್ಯದ ಡ್ರಗ್ಸ್ ಹಿಡಿದಿದ್ದೇವೆ ಎಂದು ನಿಮ್ಮ ಬೆನ್ನು ನೀವು ತಟ್ಟಿಕೊಂಡು ಹೋದರೆ ಮುಗಿಯುವುದಿಲ್ಲ. ಇನ್ನು ಮುಂದೆ ಪ್ರತಿಯೊಂದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ನಾನು ಸುಮ್ಮನಿರುವುದಿಲ್ಲ. ಯಾವುದೇ ಶಿಫಾರಸುಗಳು ನಡೆಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನನಗೆ ಯಾವ ಮುಲಾಜು ಇಲ್ಲ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.‌

ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್‌ ಆಯುಕ್ತರಾದ ರಮೇಶ್ ಬಾನೋತ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತರಾದ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತರಾದ ಕಾರ್ತಿಕ್ ರೆಡ್ಡಿ ಹಾಗೂ ಎಲ್ಲ ವಿಭಾಗಗಳ ಡಿಸಿಪಿಗಳು ಇದ್ದರು.

Ads on article

Advertise in articles 1

advertising articles 2

Advertise under the article