ಬೆಂಗಳೂರು :ಆಹಾರ ಪ್ರಿಯರೇಎಚ್ಚರ; ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ!
ಬೆಂಗಳೂರು :ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರಬಹುದೆಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.
ಹೌದು. ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿವೆ. ಇದು ನಿಮ್ಮ ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆ ಎಲ್ಲದಕ್ಕೂ ಹಾನಿ ಮಾಡುತ್ತದೆ. ಇದು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳಿಗೂ ಕಾರಣವಾಗಬಹುದು. ಆದರೆ ಇದೆಲ್ಲದರ ನಡುವೆ ಈ ಬ್ರಾಂಡ್ ಮಾತ್ರವಲ್ಲದೆ, ಎಲ್ಲಾ ಮೊಟ್ಟೆಗಳು ಕ್ಯಾನ್ಸರ್‌ಗೆ ಕಾರಣವಾಗಬಹುದೇ ಎಂದು ನೀವು ಆಶ್ಚರ್ಯ ಪಡುತ್ತಿದ್ದರೆ Trustified ಎಂಬ ಯೂಟ್ಯೂಬ್ ಚಾನೆಲ್‌ವೊಂದು ಇದನ್ನು ವಿವರಿಸುವ ವಿಡಿಯೋ ಬಿಡುಗಡೆ ಮಾಡಿದೆ.
ವಿಡಿಯೋದಲ್ಲಿ, ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುವುದರಿಂದ ನಮ್ಮ ದೇಹವನ್ನು ಬಲಪಡಿಸುವ ಸೂಪರ್‌ಫುಡ್ ಆಗಿದೆ. ಅವುಗಳ ಆರೋಗ್ಯಕರ ಕೊಬ್ಬುಗಳು ನಮ್ಮ ಹಾರ್ಮೋನುಗಳನ್ನು ಬೆಂಬಲಿಸುತ್ತವೆ ಮತ್ತು ನಮ್ಮ ದೇಹಕ್ಕೆ ಶಕ್ತಿಯ ಭಾವನೆಯನ್ನು ನೀಡುತ್ತವೆ. ಮೊಟ್ಟೆಗಳು ಸುಲಭವಾಗಿ ಲಭ್ಯವಿರುವ ಮತ್ತು ಹೆಚ್ಚಿನ ಹೂಡಿಕೆಯ ಅಗತ್ಯವಿಲ್ಲದ ಸೂಪರ್‌ಫುಡ್ ಕೂಡ ಆಗಿದೆ ಎಂದು ಹೇಳಲಾಗಿದೆ.
ಕೆಲವರು ಜನಪ್ರಿಯ ಬ್ರ್ಯಾಂಡ್‌ಗಳ ಮೊಟ್ಟೆಗಳಲ್ಲಿ AOZ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ವಿಷಯವು ಮೊಟ್ಟೆ ಸೇವಿಸುವವರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ. ಆದಾಗ್ಯೂ, ಈ ಹೊಸ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಕೂಲಂಕುಷ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.