ಹುಬ್ಬಳ್ಳಿ :ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ...!!

ಹುಬ್ಬಳ್ಳಿ: ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿಯ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಅರುಣಗೌಡ ಮೃತ ಯುವಕ. ಮೃತ ಅರುಣಗೌಡ ಪ್ರಥಮ ಪಿಯುಸಿ ಓದುತ್ತಿದ್ದ. ಸದ್ಯ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರುಣಗೌಡ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ.
ಬೈಕ್ ಸ್ಕಿಡ್ ಆಗಿ ಬಿದ್ದ ಪೊಲೀಸ್ ಕಾನ್ಸ್ಟೇಬಲ್: ಗಂಭೀರ ಗಾಯ
ಮತ್ತೊಂದು ಪ್ರಕರಣದಲ್ಲಿ ಹುಬ್ಬಳ್ಳಿ ತಾಲೂಕಿನ ಪಾಳ ಗ್ರಾಮದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ಸ್ಟೇಬಲ್ ಶಿವಾನಂದ್ ಮಾದರ್ಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಾತ್ರಿ ಕರ್ತವ್ಯ ಮುಗಿಸಿಕೊಂಡು ಊರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕಾನ್ಸ್ಟೇಬಲ್ ಶಿವಾನಂದ್ಗೆ ಚಿಕಿತ್ಸೆ ನೀಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.