ಉಡುಪಿ :ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ; ಮಂಗಳೂರಿನ ಯುವ ಉದ್ಯಮಿ ಸಾವು..!!

ಉಡುಪಿ :ಪಡುಬಿದ್ರೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ; ಮಂಗಳೂರಿನ ಯುವ ಉದ್ಯಮಿ ಸಾವು..!!

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಂಗಳೂರಿನ ಯುವ ಉದ್ಯಮಿ ಸಾವನ್ನಪ್ಪಿದ ಘಟನೆ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ಸಾವನಪ್ಪಿದ ಯುವಕ. 

ನಿನ್ನೆ ತಡರಾತ್ರಿ ಎರಡು ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ದುರ್ಘಟನೆ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅಭಿಷೇಕ್ ಅವರೇ ಚಲಾಯಿಸುತ್ತಿದ್ದರು. ಕಾರಿನಲ್ಲಿ ಸಹ ಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿದ್ದ ವಾಹನದಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದುಬಂದಿದೆ. ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. 

ತೀವ್ರ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ಸ್ಥಳೀಯರ ಸಹಕಾರದಿಂದ ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article