ಕಾನ್ಪುರ :ಚಲಿಸುವ ಕಾರಿನೊಳಗೆ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ..!!

ಕಾನ್ಪುರ: 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ತನಿಖೆಗಳು ನಡೆಯುತ್ತಿವೆ.
ಈ ಪ್ರಕರಣದಲ್ಲಿ ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ ಆರೋಪದ ಮೇಲೆ ಕಾನ್ಪುರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ದಿನೇಶ್ ಚಂದ್ರ ತ್ರಿಪಾಠಿ ಅವರನ್ನು ವಜಾಗೊಳಿಸಿದ್ದಾರೆ. ಸಚೇಂಡಿ ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.
ಕಾನ್ಪುರದ ಸಚೆಂಡಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. 7ನೇ ತರಗತಿಯ ವಿದ್ಯಾರ್ಥಿನಿಯನ್ನು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಮಹೀಂದ್ರಾ ಸ್ಕಾರ್ಪಿಯೋದಲ್ಲಿ ಅಪಹರಿಸಲಾಗಿತ್ತು. ಆಕೆಯನ್ನು ಸ್ಕಾರ್ಪಿಯೋದಲ್ಲೇ ರೈಲ್ವೆ ಹಳಿಯ ಬಳಿಯ ದೂರದ ಸ್ಥಳಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಸುಮಾರು ಎರಡು ಗಂಟೆಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿ, ನಂತರ ಆಕೆಯ ಮನೆಯ ಹೊರಗೆ ಎಸೆಯಲಾಗಿತ್ತು.
ಆಕೆಯ ಹೇಳಿಕೆಯ ಆಧಾರದ ಮೇಲೆ, ಸಬ್-ಇನ್ಸ್‌ಪೆಕ್ಟರ್ ಅಮಿತ್ ಕುಮಾರ್ ಮೌರ್ಯ ಮತ್ತು ಯೂಟ್ಯೂಬರ್ ಶಿವಬರನ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಶಿವಬರನ್ ಯಾದವ್ ಅವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಎಸ್‌ಐ ಅನ್ನು ಬಂಧಿಸಲು ಪೊಲೀಸರು 4 ತಂಡಗಳನ್ನು ರಚಿಸಿದ್ದಾರೆ. ಅಪರಾಧಕ್ಕೆ ಬಳಸಲಾದ ಎಸ್‌ಯುವಿಯನ್ನು ಮೌರ್ಯ ಅವರ ಹೆಸರಿನಲ್ಲಿಯೇ ನೋಂದಾಯಿಸಲಾಗಿದೆ.
ಸಂತ್ರಸ್ತೆಯ ಕುಟುಂಬಸ್ಥರು ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಲ್ಲಿ ಪೊಲೀಸರು ಭಾಗಿಯಾಗಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗಿದೆ