ದಾವಣಗೆರೆ: ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಬಿಜೆಪಿ ಮುಖಂಡ ಆತ್ಮಹತ್ಯೆ...!!!
Sunday, January 11, 2026
ದಾವಣಗೆರೆ: ಕೌಟುಂಬಿಕ ಕಲಹದಿಂದ ಮನನೊಂದು ಬಿಜೆಪಿ ಮುಖಂಡರೊಬ್ಬರು ಕಾರಿನಲ್ಲೇ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ದಾವಣಗೆರೆ ತಾಲೂಕಿನ ನಾಗನೂರು ಬಳಿಯ ತೋಟದಲ್ಲಿ ಇಂದು ಬೆಳಕಿಗೆ ಬಂದಿದೆ. ಮಾಜಿ ಮಹಾನಗರ ಪಾಲಿಕೆ ಸದಸ್ಯ ಚಂದ್ರಶೇಖರ್ ಸಂಕೋಲ್ ಸಾವನ್ನಪ್ಪಿದ್ದಾರೆ.
ಶನಿವಾರ ಮನೆಯಲ್ಲಿ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಈ ವೇಳೆ ತಮ್ಮ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿರುವ ಮಾಹಿತಿ ದೊರೆತಿದೆ. ಈ ಬೆಳವಣಿಗೆಯಿಂದ ಬೇಸರಗೊಂಡ ಚಂದ್ರಶೇಖರ್ ಸಂಕೋಳ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಇದೀಗ ಅಸ್ವಸ್ಥಗೊಂಡ ಮಕ್ಕಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರಿಂದ ಇಡೀ ದೇಹ ಸುಟ್ಟು ಕರಕಲಾಗಿದೆ. ಹದಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.