ಹೊನ್ನಾವರ :ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವ ದಹನ...!!
Wednesday, January 7, 2026

ಹೊನ್ನಾವರ : ಕಾರು ಪಲ್ಟಿಯಾಗಿ ಹೊತ್ತಿ ಉರಿದು ಇಬ್ಬರು ಸಜೀವ ದಹನವಾಗಿರುವ ಘಟನೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ನಲ್ಲಿ ನಡೆದಿದೆ.
ಅತಿ ವೇಗವಾಗಿ ಬಂದ ಕಾರು ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಗೇರುಸೊಪ್ಪ ರಸ್ತೆಯ ಸುಳೆಮುರ್ಕಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಬಲವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ತಡರಾತ್ರಿ ಈ ಅಪಘಾತ ಸಂಭವಿಸಿರುವುದರಿಂದ ರಕ್ಷಣೆಗೆ ಯಾರು ಇಲ್ಲದ ಕಾರಣ, ಕಾರಿನೊಳಗಿದ್ದ ಇಬ್ಬರು ಹೊರಬರಲಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದಾರೆ.
ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರು ಹಾಗೂ ಮೃತಪಟ್ಟವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.