ಶಿವಮೊಗ್ಗ :ಕಾರು-ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು...!!!
Tuesday, January 13, 2026

ತೀರ್ಥಹಳ್ಳಿ: ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಕಾರಿನಲ್ಲಿದ್ದ ರಿಹಾನ್(15) , ರಾಹಿಲ್ (9) , ಹಾಗೂ ಫಾತಿಮಾ (76) ಎಂಬುವವರು ಮೃತಪಟ್ಟಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ವಿಫ್ಟ್ ಡಿಸೈರ್ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು ಎನ್ನಲಾಗಿದೆ.